Breaking News

ಹರ್ಷ ಕೊಲೆ ಪ್ರಕರಣ : 10 ಆರೋಪಿಗಳ ಬಂಧನ


ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದ 10 ಆರೋಪಿಗಳನ್ನು  ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ನೀಡಿದೆ. ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 10 ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಫೆ 25 ರಿಂದ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ  ಶಿಫ್ಟ್ ಮಾಡಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಆರೋಪಿಗಳು ಹರ್ಷನ ಕೊಲೆಗೆ ಸಂಬಂಧಿಸಿದ ವಿಷಯಗಳನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ. ಹರ್ಷನ ಕೊಲೆ ಬಳಿಕ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಸಹ ನಡೆದಿತ್ತು. ಬಂಧಿತ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ ನಿರ್ಬಂಧ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *