ಮದ್ದೂರು: ‘ಮೇಕೆದಾಟು ಯೋಜನೆ ಜಾರಿಗಾಗಿ ಇತ್ತೀಚೆಗೆ ಕೆಲ ಸ್ನೇಹಿತರು ಪಾದಯಾತ್ರೆ ಮಾಡಿದ್ದಾರೆ. ರಾಜ್ಯಕ್ಕೆ, ಬೆಂಗ ಳೂರಿಗೆ ನೀರು ತರುತ್ತೇವೆ ಎಂದು ಹೇಳಿದ್ದಾರೆ. ಅವರಾರೂ ನನ್ನ ಹೆಸರು ಹೇಳದಿರುವುದಕ್ಕೆ ನನಗೆ ಬೇಸರ ವಾಗಿದೆ.ಆದರೆ ಅವರಿಗೆ ನಾನು ನಡೆಸಿದ ನೀರಾವರಿ ಹೋರಾಟದ ಅರಿವಿಲ್ಲ’ ಎಂದು ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಷಾದಿಸಿದರು.
ಪಟ್ಟಣದ ತಾಲ್ಲೂಕು ಕ್ರೀಡಾಂಗಣ ದಲ್ಲಿ ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ವತಿಯಿಂದ ಸಂಸ್ಥೆಯ ಗೌರವಾಧ್ಯಕ್ಷ ಕೆ.ಟಿ.ಚಂದು ಅವರಿಗೆ ಅಭಿನಂದನಾ ಕಾರ್ಯಕ್ರಮ, ‘ಅಪರೂಪ’ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ನಾನು ಪ್ರಧಾನಿಯಾಗಿದ್ದಾಗ, ಹಲವು ಪಕ್ಷಗಳ ಜೊತೆಗೂಡಿ ಅಧಿಕಾರ ನಡೆಸುತ್ತಿದ್ದ ಸಂದರ್ಭದಲ್ಲಿಯೂ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ಹೋರಾಟ ನಡೆಸಿದ್ದೇನೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ನಿವಾಸಿಗರಿಗೆ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜಲಾಶಯದಿಂದ ಹೆಚ್ಚುವರಿಯಾಗಿ 14.75 ಟಿ.ಎಂ.ಸಿ ಅಡಿ ನೀರು ಸಿಗುವಂತಾಗಲೂ ನಾನು ನಡೆಸಿರುವ ಹೋರಾಟಗಳೇ ಕಾರಣ. ಕಾವೇರಿ ನೀರಿನ ಹಕ್ಕಿಗಾಗಿ ಸಂಸತ್ತಿನ ಒಳಗೆ, ಹೊರಗೂ ನಿರಂತರವಾಗಿ ಹೋರಾ ಡುತ್ತಲೇ ಬಂದಿದ್ದೇನೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

