ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಹೇಳುತ್ತಾ ‘ಸಬ್ ಕಾ ಸರ್ವನಾಶ್’ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆಯು ಸದನದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.
ಮಂಗಳವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ‘ಬಜೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಾವು ರಾಜ್ಯವನ್ನು ಸುಭಿಕ್ಷಗೊಳಿಸುತ್ತೇವೆ ಎಂದು ಹೇಳಲಾಗಿದೆ. ಆದರೆ, ನಿಜಕ್ಕೂ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಆಗಿದೆಯಾ? ಹಾಗೆ ಹೇಳುತ್ತಾ ಸಬ್ ಕಾ ಸರ್ವನಾಶ್ ಎಂದು ದೇಶವನ್ನು ಸರ್ವನಾಶ ಮಾಡಿದ್ದಾರೆ’ ಎಂದು ಟೀಕಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಪೇಕ್ಷ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

