Breaking News

ಸೇವಾನಿರತ ಯೋಧ ನಿಧನ


ನಿಪ್ಪಾಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕುರ್ಲಿ ಗ್ರಾಮದ ನಿವಾಸಿ, ಸಿಐಪಿಎಫ್‍ನ ಯೋಧ ನವನಾಥ ದಿವಟೆ (30) ಉತ್ತರಪ್ರದೇಶದಲ್ಲಿ ಸೇವಾನಿರತನಿದ್ದಾಗ ಸಾವಿಗೀಡಾಗಿದ್ದಾರೆ.ಅವರಿಗೆ ಪತ್ನಿ, ತಾಯಿ, ತಂದೆ, ಪುತ್ರ, ಪುತ್ರಿ, ಸಹೋದರ ಮತ್ತು ಸಹೋದರಿ ಇದ್ದಾರೆ.
ಪಾರ್ಥಿವ ಶರೀರವನ್ನು ಕುರ್ಲಿ ಗ್ರಾಮಕ್ಕೆ ಬುಧವಾರ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

10 ವರ್ಷಗಳಿಂದ ಅವರು ಭಾರತೀಯ ಸೈನ್ಯದಲ್ಲಿ ಕೆಲಸ ಮಾಡುತ್ತಿದ್ದರು. ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಂದೋಬಸ್ತ್‌ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಸೋಮವಾರ ಬೆಳಿಗ್ಗೆ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *