Breaking News

ಅಂಜನಾಂದ್ರಿ ಬೆಟ್ಟಕ್ಕೆ ಮೂಲಸೌಕರ್ಯ ಸೌಲಭ್ಯ ಶೀಘ್ರ ಒದಗಿಸಲಾಗುವುದು : ಬೊಮ್ಮಾಯಿ


ಗಂಗಾವತಿ : ಅಯೋಧ್ಯೆಯಂತೆ ರಾಮಭಕ್ತ ಹನುಮಂತ ಜನಿಸಿದ ಕಿಷ್ಕಿಂದಾ ಅಂಜನಾದ್ರಿ ಅಭಿವೃದ್ಧಿ ಕಾಣಬೇಕಿದೆ. ಸದ್ಯ ಬಜೆಟ್ ನಲ್ಲಿ ನೂರು ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಂಜನಾದ್ರಿಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಬೆಳೆಸಲು ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದರ ಅವರು. ಶೀಘ್ರವೇ ಅಂಜನಾದ್ರಿಗೆ ಧಾರ್ಮಿಕ ದತ್ತಿ ಸೇರಿ ಇತರೆ ಸಚಿವರ ಜತೆ ಭೇಟಿ ನೀಡಿ ಅಗತ್ಯ ಸೌಕರ್ಯಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಆಂಜನೇಯ ಕಿಷ್ಕಿಂದಾ ಅಂಜನಾದ್ರಿಯಲ್ಲಿಯೇ ಜನಿಸಿದ್ದು ಎನ್ನಲು ಅನೇಕ ದಾಖಲೆಗಳಿದ್ದು ಅವುಗಳನ್ನು ಎಂದರು.

ಸಚಿವ ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಕುರಿ ಉಣ್ಣೆ ನಿಗದ ಅಧ್ಯಕ್ಷ ಶರಣು ತಳ್ಳಿಕೇರಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಮಾಜಿ ಶಾಸಕ ಕೆ.ಶರಣಪ್ಪ, ಮಾಜಿ ಸಚಿವ ನಾಗಪ್ಪ ಸಾಲೋಣಿ ಇತರರು ಇದ್ದರು.

Share News

About admin

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *