ನವದೆಹಲಿ: ಪಂಚರಾಜ್ಯದ ಚುನಾವಣೆಯಲ್ಲಿ 4 ಸ್ಥಾನವನ್ನು ಬಿಜೆಪಿಯೇ ಬಾಜಿಕೊಂಡಿದೆ. ಎಲ್ಲರೂ ಕಾತುರದಿಂದ ಕಾಯುತ್ತೀದ್ದ ಫಲಿತಾಂಶ ದೊರೆಕಿದೆ.
ಉತ್ತರಪ್ರದೇಶ, ಪಂಜಾಬ್, ಮಣಿಪುರ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.
ಬಿಜೆಪಿ ಸಂಘಟನಾ ಕಾರ್ಯದರ್ಶಿ ಕರ್ನಾಟಕದ ಬಿ.ಎಲ್.ಸಂತೋಷ್, ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರಿನ ಸಿ.ಟಿ.ರವಿ, ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಉಸ್ತುವಾರಿ ವಹಿಸಿಕೊಂಡು ಬಿಜೆಪಿ ಗೆಲುವಿಗೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಹೀಗಾಗಿ ಬಿಜೆಪಿಯ ದೊಡ್ಡ ಗೆಲುವಿನಲ್ಲಿ ಕನ್ನಡಿಗರ ಪಾತ್ರವನ್ನೂ ದೊಡ್ಡದಾಗಿ ಪ್ರಶಂಸಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

