Breaking News

ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರುವಿಡುವಂತೆ ಒತ್ತಾಯ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರ ಹೆಸರನ್ನು ಶಿವಮೊಗ್ಗದಲ್ಲಿ ನಿರ್ವಣವಾಗುತ್ತಿರುವ ನೂತನ  ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ.

ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿ ಎಂದು ಒತ್ತಾಯ ಮಾಡಿದರು. ಕೇಂದ್ರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು  ಭರವಸೆ ನೀಡಿದರು.
 
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಜನಪ್ರತಿನಿಧಿಗಳ ನಿಯೋಗ ಮನವಿ ಪತ್ರ ಅರ್ಪಿಸಿದೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರ ಹೆಸರು ಉಳಿಯಲು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕಾಗಿದೆ . ಈ ಬಗ್ಗೆ  ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಡಿ.ಎಸ್. ಅರುಣ್ ಹಾಗೂ ಇತರರು ನಿಯೋಗದಲ್ಲಿದ್ದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *