ಬೆಂಗಳೂರು:ಹಣ ಲೂಟಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಇದರಿಂದ ಕರ್ನಾಟಕವು ಬಿಹಾರ ಆಗುವತ್ತ ಸಾಗುತ್ತಿದೆ’. ‘ನಾವು ರಾಜಕಾರಣಿಗಳು ಹಣ ತಿನ್ನುವುದನ್ನು ನಿಲ್ಲಿಸಿದರೆ ರಾಜ್ಯದ ಅಭಿವೃದ್ಧಿ ಆಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳವಳ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ‘ರಾಜ್ಯದಲ್ಲಿ ಕೆಲವು ಜಿಲ್ಲಾಧಿಕಾರಿ, ವಿಭಾಗಾಧಿಕಾರಿಗಳು ಲೂಟಿ ಮಾಡಿದ್ದಾರೆ. ಇದು ಸಾಧ್ಯವಾಗಿದ್ದು ಯಾರಿಂದ? ಮೊದಲಿಗೆ ನಾವು (ರಾಜಕಾರಣಿಗಳು) ತಿನ್ನುವುದು ನಿಲ್ಲಿಸಬೇಕು’ ಎಂದರು.
‘ವಿಧಾನಪರಿಷತ್ ಚುನಾವಣೆಯಲ್ಲಿ ₹ 25 ಕೋಟಿಯಿಂದ ₹ 50 ಕೋಟಿಗೂ ಹೆಚ್ಚು ಹಣ ಖರ್ಚು ಮಾಡುತ್ತಾರೆ ಎಂದರೆ ಪರಿಸ್ಥಿತಿ ಎಲ್ಲಿಗೆ ಹೋಗಿದೆ ಎಂಬುದನ್ನು ಊಹಿಸಬಹುದು. ನಾವು ರಾಜಕಾರಣಿಗಳು ಹೇಗೆ ಇರುತ್ತೇವೆ ಎಂಬುದು ಮುಖ್ಯ. ನಾವು ಸರಿ ಆದರೆ ವ್ಯವಸ್ಥೆಯೂ ಬದಲಾವಣೆ ಆಗುತ್ತದೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

