Breaking News

ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ ಇಂದು ಸಿಎಂ ಚಾಲನೆ


ಚಿಕ್ಕಬಳ್ಳಾಪುರ : ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ’ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಗುಂಗಿರ್ಲಹಳ್ಳಿ (ಮಜರೆ) ಗ್ರಾಮದಲ್ಲಿ 171 ಕುಟುಂಬಗಳಿದ್ದು 977 ಜನರು ವಾಸವಿದ್ದಾರೆ, ಈ ಪೈಕಿ 157 ಖಾತೆದಾರರಿದ್ದಾರೆ. 977 ಜನಸಂಖ್ಯೆ ಯುಳ್ಳ ಈ ಕುಗ್ರಾಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸಿ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹಾಗೂ ಇತರೆ ದಾಖಲೆಗಳನ್ನು ಖುದ್ದಾಗಿ ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸುವ ಮೂಲಕ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *