Breaking News

ದುರ್ಗಾಂಬಿಕಾದೇವಿ ಜಾತ್ರೆ ಮಹೋತ್ಸವ, ಪ್ರಾಣಿ ಬಲಿ ನೀಡುವುದು ನಿಷೇಧಿಸಲಾಗಿದೆ : ಡಿಸಿ ಆದೇಶ

ದಾವಣಗೆರೆ : ಮಾ.13 ರಿಂದ ಮಾ.16 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ಜಾತ್ರೆಯು ಜರುಗಲಿದೆ ಹಾಗೂ ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಹಾಗೂ ಈ ಸಂದರ್ಭದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುವುದನ್ನು ನಡೆದಯಕೊಳ್ಳಬಾರದು ಎಂದು ಡಿಸಿ ಆದೇಶಿಸಿದ್ದಾರೆ.

ಶ್ರೀ ದುಗಾರ್ಂಬಿಕಾದೇವಿ ಹಾಗೂ ವಿನೋಬನಗರ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ನೀಡುವುದನ್ನು ಎಂದು ಕಂಡುಬಂದಿರುವ ಹಿನ್ನಲೆಯಲ್ಲಿ ನಗರದೇವತೆ ಶ್ರೀ ದುಗಾರ್ಂಬಿಕಾದೇವಿ ಹಾಗೂ ವಿನೋಬನಗರ ಶ್ರೀ ಚೌಡೇಶ್ವರಿ ದೇವಿ ಜಾತ್ರೆಯಲ್ಲಿ ದೇವಸ್ಥಾನದ ಅಥವಾ ಜಾತ್ರಾ ಅವರಣದ ಪ್ರದೇಶದೊಳಗೆ ಭಕ್ತಾಧಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದನ್ನು ಮತ್ತು ಇತರೆ ಪ್ರಾಣಿಗಳನ್ನು ತೆಗೆದುಕೊಂಡು ಬರುವುದು, ಮಾರಕಾಸ್ತ್ರಗಳನ್ನು ತರುವುದು ಹಾಗೂ ಇತರೆ ಅನಾಗರಿಕ ಪದ್ಧತಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಅದೇಶಿಸಿದ್ದಾರೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *