Breaking News

ಚೊಂಟಾ ಬಾಂಬೆಯಲ್ಲಿ ಕೊಲೆಯಾದ ರೀತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆಯಲ್ಲಿ ನೆತ್ತರು ಹರೆದಿದ್ದು, ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ.

ನಗರದ ಕೃಷ್ಣ ಭವನದ ಎದುರಿನಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕೊಲೆಯಾದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಬೆಳಿಗ್ಗೆ ರಕ್ತ ನೋಡಿದ ಜನರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು ಸುಮಾ ಎಂದು ಅಂದಾಜಿಸಲಾಗಿದ್ದು, ಪ್ರಕರಣದ ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಗೊತ್ತಾಗಲಿದೆ ಎನ್ನುತ್ತಾರೆ ಡಿಸಿಪಿ ಸಾಹಿಲ್ ಬಾಗ್ಲಾ.

ಅಪರಿಚಿತ ಮಹಿಳೆಯೊಬ್ಬಳನ್ನು ನಡುರಸ್ತೆಯಲ್ಲಿ ಕೊಲೆ ಮಾಡಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *