Breaking News

ರೈಲಿಗೆ ತೆಲೆಕೊಟ್ಟು ಸಾವಿನಲ್ಲಿ ಒಂದಾಂದ ದಂಪತಿಗಳು

ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಲಿಸುವ ರೈಲಿಗೆ ತಲೆ ಕೊಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.

ರೇಲ್ವೆ ನಿಲ್ದಾಣದ ಕೂಗಳತೆ ದೂರದಲ್ಲಿಯೇ ದಂಪತಿ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಕೆಲವೇ ಸಮಯದ ಹಿಂದೆ ಬೆಳಕಿಗೆ ಬಂದಿದೆ. ಸುಮಾರು 35 ರಿಂದ 40 ವಯಸ್ಸಿನ ಮಹಿಳೆ ಹಾಗೂ 45ರಿಂದ 50 ವಯಸ್ಸಿನ ಪುರುಷ ಸಾವಿಗೀಡಾಗಿದ್ದು, ದಂಪತಿಗಳು ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ತೆರಳಿದ ರೇಲ್ವೆ ಠಾಣೆಯ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಸಾವಿಗೀಡಾಗಿರುವ ದಂಪತಿಗಳ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *