ದಾಮಾ. 13ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ .ಐತಿಹಾಸಿಕ ಪ್ರಸಿದ್ಧ ನಗರದೇವತೆ ಶ್ರೀ ದುಗ್ಗಮ್ಮ ದೇವಿ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದರು.
ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಜಾತ್ರೆ ಕುರಿತು ಅವರು ಮಾಹಿತಿ ನೀಡಿದರು. ಮಾ. 13ರಿಂದ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು, ಮೊದಲ ದಿನ ಬೆಳಿಗ್ಗೆ ದೇವಿಗೆ ಪಂಚಾಮೃತ ಅಭಿಷೇಕ, ಕಂಕಣಧಾರಣೆ ನಂತರ ರಾತ್ರಿ ಸಾರು ಹಾಕುವ ಕಾರ್ಯಕ್ರಮ ನಡೆಯಲಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

