ಮೈಸೂರು: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಸ್ವತಹ ಮೈಸೂರು ವಿವಿಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು, ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ನಿವಾಸಕ್ಕೆ ತೆರಳಿ, ಪತ್ನಿ ಅಶ್ವಿನಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಈ ವೇಳೆ ಅಂದು ಪುನೀತ್ ರಾಜ್ ಕುಮಾರ್ ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡ ಅವರು, ಈ ಹಿಂದೆ ಹಲವು ಬಾರಿ ಅಪ್ಪುಗೆ ಗೌರವ ಡಾಕ್ಟರೇಟ್ ನೀಡುವ ವಿಷಯ ಪ್ರಸ್ತಾಪವಾಗಿತ್ತು. ಆದ್ರೇ. ಅವರು ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು ಎಂದು ನೆನಪು ಮಾಡಿಕೊಂಡಿದ್ದಾರೆ.
ಇದಲ್ಲದೇ, ತಂದೆಯವರಿಗೆ ನೀಡಿದ್ದೇವೆ. ನಿಮಗೂ ಗೌರವ ಡಾಕ್ಟರೇಟ್ ನೀಡುತ್ತೇವೆ ಎಂದಾಗ, ಅವರದ್ದೇ ತೂಕ ಬೇರೆ. ನನ್ನದು ಬೇರೆ. ನಾನಿನ್ನೂ ಪ್ರಶಸ್ತಿ ಸ್ವೀಕರಿಸುವ ಮಟ್ಟಕ್ಕೆ ಬೆಳೆದಿಲ್ಲ ಎಂಬುದಾಗಿ ವಿನಯಪೂರ್ವಕವಾಗಿ ನಿರಾಕರಿಸಿದ್ದನ್ನು ಸ್ಮರಿಸಿ, ಗದ್ಗದಿತರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

