ಮದ್ದೂರು :ಈಗಾಗಲೇ ನನಗೆ ನಾಲ್ಕೈದು ಕ್ಷೇತ್ರಗಳಿಂದ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ.ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು.
ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ತಮ್ಮ ಸಹಪಾಠಿ ಪುಟ್ಟಿನಕೆರೆ ಸತ್ಯನಾರಾಯಣಪುತ್ರಿಯ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.
ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲಾ. ಅಂದಿನ ರಾಜಕೀಯ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇನೆಯೇ ಹೊರತು, ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

