ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳ್ಳಿಗೆ ಪಾಲಕರು ಬುದ್ದಿವಾದ ಹೇಳುವುದೇ ಕಷ್ಟವಾಗಿದೆ. ಮಾತಾನಾಡುವ ಮುಂಚೆ ಸಾವಿರಾರು ಸಾರಿ ಯೋಚನೆ ಮಾಡುವ ಪರಿಸ್ಥಿತಿ ಉಂಟಾಗಿದೆ. ತಾಯಿ ಬೈದಿದಕ್ಕೆ ಮಗ ನೇಣಿಗೆ ಶರಣಾಗಿರುವ ಘಟನೆ ಸುಂಕದಕಟ್ಟೆ ಬಳಿಯ ಶ್ರೀನಿವಾಸ್ ನಗರದ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದಿದೆ.
ಸಂಜಯ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಕಳೆದ ಮೂರು ದಿನಗಳಿಂದ ಮಗ ಸಂಜಯ್ ಮನೆಗೆ ಬಂದಿರಲಿಲ್ಲ.
ಯಾವುದೇ ಕೆಲಸಕ್ಕೆ ಹೋಗದೆ ಅಲೆದಾಡುತ್ತಿದ್ದ. ಹೀಗಾಗಿ ತಂದೆ ತಾಯಿ ಮಗ ಸಂಜಯ್ ಗೆ ಬೈಯ್ದು ಬುದ್ದಿವಾದ ಹೇಳಿದ್ದರು. ಬುದ್ದಿವಾದ ಹೇಳಿದ್ದಕ್ಕೆ ತಾಯಿಯನ್ನು ಬೈದು ಹಲ್ಲೆಗೆ ಮುಂದಾಗಿದ್ದ. ಈ ವೇಳೆ ತಂದೆ ತಡೆದು ಮಗನಿಗೆ ಏಟು ಕೂಡ ಒಡೆದಿದ್ದರು. ಇದರಿಂದ ಬೇಜಾರಾಗಿದ್ದ ಸಂಜಯ್, ರಾತ್ರಿ ಎಲ್ಲಾ ಮಲಗಿದ್ದ ವೇಳೆ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಕಾಮಾಕ್ಷಿ ಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುಡಿಆರ್ ಅಡಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

