ಇರ್ಪಿನ್: ಉಕ್ರೇನ್ ರಾಜಧಾನಿ ಕೀವ್ ಪ್ರಾಂತ್ಯದ ಇರ್ಪಿನ್ ನಗರದಲ್ಲಿ ರಷ್ಯಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಅಮೆರಿಕದ ಪತ್ರಕರ್ತ ಬ್ರೆಂಟ್ ರೆನಾಡ್ ಅವರು ಭಾನುವಾರ ಬಲಿಯಾಗಿದ್ದಾರೆ. ಮತ್ತೊಬ್ಬ ಪತ್ರಕರ್ತ ಗಾಯಗೊಂಡಿದ್ದಾರೆ ಎಂದು ಕೀವ್ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಆಯಂಡ್ರಿಯ್ ನ್ಯೆಬಿತೋವ್ ತಿಳಿಸಿದ್ದಾರೆ.
‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯಲ್ಲಿ ವಿಡಿಯೋ ಜರ್ನಲಿಸ್ಟ್ ಆಗಿದ್ದ ಬ್ರೆಂಟ್ ಪ್ರತಿಭಾವಂತ ಛಾಯಾಗ್ರಾಹಕ ಮತ್ತು ಚಿತ್ರ ನಿರ್ಮಾಪಕ ಆಗಿದ್ದರು. ಅವರು ಪತ್ರಿಕೆಗೆ ಉತ್ತಮ ಕೊಡುಗೆ ನೀಡಿದ್ದರು. ಅವರ ಅಗಲಿಕೆ ಆಘಾತವಾಗಿದೆ’ ಎಂದು ನ್ಯೂಯಾರ್ಕ್ ಟೈಮ್ಸ್ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

