Breaking News

ಹಿಜಾಬ್ ಕುರಿತು ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟ

ಬೆಂಗಳೂರು : ಹಿಜಾಬ್ ಧರಿಸಲು ಕುರಿತು ನಾಳೆ (ಮಾ.15, ಮಂಗಳವಾರ) ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.

ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು. ಅನಂತರ ಅಂತಿಮ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ಪೀಠದಲ್ಲಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಸ್ಕಾರ್ಫ್ ಬಳಸುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ ಎಂದು ವಿದ್ಯಾರ್ಥಿಗಳ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಹಿಜಾಬ್ ಅನ್ನು ಸಂವಿಧಾನವು ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಅಡಿಯಲ್ಲಿ ರಕ್ಷಿಸಲಾಗಿದೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ದೃಷ್ಟಿಯಿಂದ ಅದನ್ನು ನಿಷೇಧಿಸುವ ಅಧಿಕಾರವನ್ನು ಯಾವುದೇ ಕಾಲೇಜು ಅಭಿವೃದ್ಧಿ ಮಂಡಳಿ ಹೊಂದಿಲ್ಲ ಎಂದು ವಕೀಲರು ವಾದಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *