ಬೆಂಗಳೂರು: ಹಿಜಾಬ್ ವಿವಾದ ಸದನದಲ್ಲಿ ಮತ್ತೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಮಂಡಿಸಿದ ಪರಿಣಾಮ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು.
ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಕುರಿತು ಪ್ರಾಥಮಿಕ ವಿಚಾರ ಮಂಡಿಸುವ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಜಮೀರ್ ಅಹಮದ್ ಖಾನ್, ಇಷ್ಟು ದಿನ ಕುಮಾರಸ್ವಾಮಿ ಏಕೆ ಸುಮ್ಮನಿದ್ದರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಕೆಲ ಕಾಲ ವಾದ-ಪ್ರತಿವಾದ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

