Breaking News

ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಂಧುತ್ವ ಪ್ರಮಾಣ ಪತ್ರಸಿಗದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ‌ ಕುಮಾರ ಚಿಂಚೋಳಿ ಗ್ರಾಮದ ಕೆಎಸ್‌ಆರ್‌ಟಿಸಿ ಚಾಲಕ ಓಂಕಾರ್ ಶೇರಿಕರ್ ಅವರ ಆತ್ಮಹತ್ಯೆ ಕುರಿತಾಗಿ ವಿಧಾನಸಭಾ ಅಧಿವೇಶನದಲ್ಲಿ  ಮಾತನಾಡಿದರು.

ಮುಂದುವರಿದು ಮಾತನಾಡಿದ ಅವರು, ಇದಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯ ವರದಿ ಪಡೆದು ನೀಡಲಾಗುತ್ತಿತ್ತು. ಈ ಸಿಆರ್‌ಇ ಸೆಲ್ ಜನರಿಗೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಬಹಳ ಹಿಂದಿನಿಂದಲೂ ಇತ್ತು. ಸರ್ಕಾರ ಮತ್ತೆ ಅವರಿಗೆ ಅಧಿಕಾರ ನೀಡಿ ಜನರನ್ನು ಇನ್ನಷ್ಟು ಸಮಸ್ಯೆಗೆ ನೂಕಿದೆ ಎಂದರು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *