ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

