Breaking News

ಮಾ.16 ರವರೆಗೆ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ


ದಾವಣಗೆರೆ : ನಗರದಲ್ಲಿ ನಗರ ದೇವತೆ ಶ್ರೀ ದುಗಾರ್ಂಬಿಕಾ ದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ ಎಂದು
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.

ಮಾ.15 ರ ಬೆಳಿಗ್ಗೆ 06 ಗಂಟೆಯಿಂದ ಮಾ.16 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಗೊಳಿಸಿದೆ.ಜಿಲ್ಲೆಯಲ್ಲಿ ಮಾ.13 ರಿಂದ ಮಾ.22 ರವರೆಗೆ ನಗರ ದೇವತೆ ಶ್ರೀ ದುಗಾರ್ಂಬಿಕಾ ದೇವಿಯ ಜಾತ್ರೆ ಮತ್ತು ವಿನೋಬನಗರದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆಯು ನಡೆಯಲಿದ್ದು, ಜಾತ್ರೆಗೆ ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿದ್ದಾರೆ ಹಾಗೂ ಹಿಜಾಬ್ ವಿವಾದವು ಈಗಾಗಲೇ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶ್ರೀ ದುಗಾರ್ಂಬಿಕಾ ದೇವಿ ದೇವಸ್ಥಾನ ಮತ್ತು ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಸುತ್ತಮುತ್ತ 500 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *