ಚಾಮರಾಜನಗರ:ಕೌಟುಂಬಿಕ ಕಲಹಕ್ಕೆ ಬೇಸತ್ತ ಪಿಡಿಓ ಪತ್ನಿ ನೇಣಿಗೆ ಶರಣಾದ ಘಟನೆ ನಡೆದಿದೆ.
ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ಪಿಡಿಒ ಆನಂದ್ ಕಾಂಬ್ಳೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆನಂದ್ ಕಾಂಬ್ಳೆ ಜತೆ 3 ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ದಿವ್ಯಾಗೆ ಮದುವೆ ಆಗಿತ್ತು.
ದಂಪತಿ ಕೊಳ್ಳೇಗಾಲದಲ್ಲಿ ವಾಸವಿದ್ದರು. ದಂಪತಿಗೆ 8 ತಿಂಗಳ ಹೆಣ್ಣು ಮಗು ಇದೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

