Breaking News

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿಬಿ ಅಧಿಕಾರಿಗಳು :78 ಕಡೆ ದಾಳಿ


ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ಇನ್ನೂರಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್​ ನೀಡಿದ್ದು, ರಾಜ್ಯಾದ್ಯಂತ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ 3 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿದಂತೆ 14 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ ಶಿವಕುಮಾರ್ ಹೆಚ್ಚುವರಿ ನಿರ್ದೇಶಕ, ಕೈಗಾರಿಕೆ & ವಾಣಿಹಜ್ಯ ಇಲಾಖೆ, ಖನಿಜ ಭವನ, ಸಿ.ಜೆ ಜ್ಞಾನೇಂದ್ರ ಕುಮಾರ್, ಹೆಚ್ಚುವರಿ ಆಯುಕ್ತ ರಸ್ತೆ ಸುರಕ್ಷತೆ, ಸಾರಿಗೆ ಇಲಾಖೆ, ಬಿಡಿಎ ಉಪ ನಗರ ಯೋಜನೆಯ ನಿರ್ದೇಶಕರಾದ ವಿ.ರಾಕೇಶ್ ಕುಮಾರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *