Breaking News

ನೀರಾವರಿ ನಿಗಮದ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಧಾರವಾಡ:ನೀರಾವರಿ ನಿಗಮದ ಎಇಇ ಬಸವರಾಜ ಪಾಟೀಲ ಎನ್ನುವವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಧಾರವಾಡದ ಸನ್ಮತಿನಗರದಲ್ಲಿ ಬಸವರಾಜ ಅವರ ಮನೆ ಇದ್ದು, ಅಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾದಗಿರಿ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದೆ.

ಸನ್ಮತಿನಗರದಲ್ಲಿರುವ ಬಸವರಾಜ ಅವರ ಮನೆ ಸದ್ಯ ಲಾಕ್ ಆಗಿದ್ದು, ಸಂಬಂಧಿಕರನ್ನು ಸ್ಥಳಕ್ಕೆ ಕರೆಯಿಸಿ ಬಾಗಿ ತೆಗೆಯಲು ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇರುವುದರಿಂದ ಎಸಿಬಿ ಅಧಿಕಾರಿಗಳು ಹೊರಗಡೆ ಕಾಯುತ್ತಿದ್ದಾರೆ. ಬಸವರಾಜ ಅವರು ಬೆಂಗಳೂರಿನಲ್ಲಿದ್ದು, ಅವರು ಅಲ್ಲಿಂದ ಬಂದ ನಂತರವೇ ಬಾಗಿಲು ತೆರೆಯುವ ಸಾಧ್ಯತೆ ಇದೆ

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *