Breaking News

ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ನೇಣಿಗೆ ಶರಣು

ಧಾರವಾಡ: ಪೇಡೆನಗರದ ರಜತಗಿರಿಯ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬ ನೇಣಿಗೆ ಶರಣಾಗಿದ್ದಾನೆ.ಅಭಿಷೇಕ ಮಹಾದೇವಪ್ಪ ಮಾಳಗಿ (29) ಎಂಬಾತನೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಈತ ಉತ್ತಮ ಕ್ರಿಕೆಟರ್ ಕೂಡ ಆಗಿದ್ದ. ಸ್ಥಳೀಯ ಎಸ್‌ಡಿಎಂ ಕ್ರಿಕೆಟ್ ಅಕಾಡೆಮಿ ಪರ ಆಟವಾಡುತ್ತಿದ್ದ. ಅಭಿಷೇಕ ಒಬ್ಬ ಒಳ್ಳೆ ವಿಕೇಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಆಗಿದ್ದರು.

ಎಂಬಿಎ ಪದವೀಧರನಾಗಿದ್ದ ಈತ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದು ಆದರೆ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲವಾಗಿದೆ.ವಿದ್ಯಾಗಿರಿ ಪೊಲೀಸರು ಅಭಿಷೇಕ ನಿವಾಸಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *