ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದು.. ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೆ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಮೂಲದ ಸುಮಾ ಎಂಬುವಂತ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಶಹರ ಪೊಲೀಸ್ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯ ಕೃಷ್ಣಭವನದ ಎದುರಿನಲ್ಲಿ ಕೊಲೆ ಮಾಡಿದ್ದ ಪ್ರಕರಣವನ್ನು ಬೆನ್ನಟ್ಟಿದ್ದ ಶಹರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

