ಬೆಂಗಳೂರು :ಹಿಜಾಬ್ ವಿವಾದ ಕುರಿತು ಆದೇಶದ ಬಳಿಕ ಪರೀಕ್ಷೆಗೆ ಹಾಜರಾಗದವರನ್ನು ಪರಿಗಣಿಸುವುದಿಲ್ಲ. ‘ಹಿಜಾಬ್ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ ನೀಡುವುದಕ್ಕೆ ಮೊದಲು ಪರೀಕ್ಷೆಗಳಿಗೆ ಹಾಜರಾಗದ ವಿದ್ಯಾರ್ಥಿನಿಯರಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ರಘುಪತಿ ಭಟ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ನಿಲುವು ತಳೆಯಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಇತರರ ಜತೆ ಚರ್ಚೆ ನಡೆಸಿ ನಿರ್ಣಯ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.