ಎಂಖ್ಯಾತ ಸಾಹಿತಿ ಮತ್ತು ದಿಟ್ಟ ಪತ್ರಕರ್ತ ಡಿ.ವಿ. ಗುಂಡಪ್ಪ( ಡಿವಿಜಿ) ಅವರು ವೃತ್ತಿನಿರತ ಪತ್ರಕರ್ತರ ಒಂದು ಘನತೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ದ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು.
ನಗರದ ಕೆಯುಡಬ್ಲ್ಯೂಜೆಯಲ್ಲಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡಿವಿಜಿ ಅವರ ಜನ್ಮದಿನ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿವಿಜಿ ಸಾಹಿತಿಯಾಗಿ ಅಷ್ಟೆ ಅಲ್ಲ ಪತ್ರಕರ್ತರಾಗಿ ಪತ್ರಿಕಾ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿದವರು. ಪತ್ರಿಕಾಧರ್ಮ, ಮೌಲ್ಯಗಳನ್ನು ಗಟ್ಟಿಯಾಗಿ ಪ್ರತಿಪಾದಿಸಿದರು. ಕನ್ನಡ ಪತ್ರಿಕೋದ್ಯಮದಲ್ಲಿನ ಅಸಂಘಟಿತ ಪತ್ರಕರ್ತರನ್ನು ಒಗ್ಗೂಡಿಸಿ ಪತ್ರಕರ್ತರ ಸಂಘ ಸ್ಥಾಪಿಸಿದ ಹೆಗ್ಗಳಿಕೆ ಅವರದ್ದಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

