Breaking News

ಪೊಲೀಸ್​​ ಕಾನ್ಸ್​ಟೇಬಲ್​ ಆತ್ಮಹತ್ಯೆ ಪ್ರಕರಣ : 9 ಜನರ ವಿರುದ್ಧ ಎಫ್​ಐಆರ್​ ದಾಖಲು


ಗದಗ: ಕಿರುಕುಳಕ್ಕೆ ಬೇಸತ್ತು, ಡೇತ್ ನೋಟ್ ಬರೆದಿಟ್ಟು
ಆತ್ಮಹತ್ಯೆ ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ.

ನಗರದ ಬೆಟಗೇರಿ ಬಡಾವಣೆ ಪೊಲೀಸ್​​ ಠಾಣೆಯ ಕಾನ್ಸ್​ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ ಹೆಚ್ಚಾಗಿದ್ದು, ಮಾನಸಿಕ ಹಿಂಸೆ ತಾಳದೇ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಜುನ್ ಪಾಟೀಲ್​ಗೆ ಪತ್ನಿ, ಇಬ್ಬರು ಮಕ್ಕಳು, ತಂದೆ-ತಾಯಿ‌ ಇದ್ದರು. ಲಕ್ಕುಂಡಿ ಗ್ರಾಮದಲ್ಲಿ ಪಾರ್ಥಿವ ಶರೀರಕ್ಕೆ ಪೊಲೀಸ್​​ ಇಲಾಖೆಯಿಂದ ಗೌರವ ಸಲ್ಲಿಸಲಾಯಿತು. ಡಿವೈಎಸ್​​ಪಿ ಶಿವಾನಂದ, ಸಿಪಿಐ ಸೇರಿದಂತೆ ಹಲವರು ಈ ವೇಳೆ ಭಾಗಿಯಾಗಿದ್ದರು. ಮಗನ ಕಳೆದುಕೊಂಡ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಕಿರುಕುಳ ನೀಡಿದ್ದ ಆರೋಪದ ಮೇಲೆ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿದೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *