Breaking News

ಸಾಹಿತಿ ಕಲಬುರ್ಗಿ ಹತ್ಯೆ : ಮತ್ತೇ ಚುರುಕುಗೊಂಡ ತನಿಖೆ

ಧಾರವಾಡ : ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ ಹಲವು ದಿನಗಳು ಕಳೆದಿವೆ. ವಿಚಾರಣೆ ನಂತರ ಕಲಬುರ್ಗಿ ಹಂತಕರನ್ನು ಬಂಧಿಸಲಾಗಿತ್ತು. ಸದ್ಯ ಸುದೀರ್ಘ ಅವಧಿಯ ಬಳಿಕ ಈಗ ಆರೋಪಿಗಳ ಪ್ರಮುಖ ವಿಚಾರಣೆ ಧಾರವಾಡ ನ್ಯಾಯಾಲಯ ದಲ್ಲಿ ಆರಂಭಗೊಂಡಿದೆ.

ಪ್ರಮುಖ ಆರೋಪಿಗಳಾದ ಗಣೇಶ ಮಿಸ್ಕಿನ್, ಅಮೂಲ್ ಕಾಳೆ, ಅಮಿತ್ ಬದ್ದಿ, ವಾಸುದೇವ ಸೂರ್ಯವಂಶಿ, ಪ್ರವೀಣ ಚತುರ್. ಈ ಆರೋಪಿಗಳನ್ನು ಈ ಹಿಂದೆಯೇ ವಿಚಾರಣೆ ಮಾಡಬೇಕಿತ್ತು. ಆದರೆ ಕೊರೊನಾ ಕಾರಣಕ್ಕೆ ಎರಡು ವರ್ಷ ಭೌತಿಕ ಕಲಾಪಗಳೇ ನಡೆದಿರಲಿಲ್ಲ.

ಎಲ್ಲ ಆರೋಪಿಗಳನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕವೇ ಸಾಕ್ಷಿಗಳ ಮುಂದೆ ಮುಖಾಮುಖಿಯಾಗಿಸಿ ವಿಚಾರಣೆ ನಡೆಸಬೇಕಿತ್ತು. ಹೀಗಾಗಿ ಧಾರವಾಡದ 4ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಈ ಐವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *