Breaking News

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕಣೆ : ಮನೆಗೆ ಮರಳಿದ ಮಕ್ಕಳು

ವಿಜಯಪುರ (ಬೆಂಗಳೂರು ಗ್ರಾಮಾಂತರ): ಹಿಜಾಬ್
ಕುರಿತು ಹೈಕೋರ್ಟ್ ತೀರ್ಪನ್ನು ನೀಡಿದರು ಪ್ರತಿಭಟನೆಗೆ ಮುಕ್ತು ದೊರತ್ತೀಲ್ಲಾ.

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ  ಪ್ರವೇಶ ನಿರಾಕರಿಸಲಾಯಿತು. ಸಿಬ್ಬಂದಿಯ ಈ ನಿರ್ಧಾರ ಖಂಡಿಸಿ ವಿದ್ಯಾರ್ಥಿನಿಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.

ಪಿಯು ಪ್ರಥಮ ವರ್ಷದ 16 ವಿದ್ಯಾರ್ಥಿನಿಯರು ಮನೆಗೆ ಮರಳಿ ಹೋದರು.ಸ್ಥಳಕ್ಕೆ ಬಂದ ತಹಶೀಲ್ದಾರ್ ಶಿವರಾಜ್, ‘ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಹಿಜಾಬ್ ತೆರೆದಿಟ್ಟು ತರಗತಿಗೆ ಹೋಗಿ’ ಎಂದು ಮನವೊಲಿಸಿದರು.

ಮನವೊಲಿಕೆಗೆ ಮಣಿದ 21 ದ್ವಿತೀಯ ಪಿಯು ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ಸಮ್ಮತಿಸಿದರು. ಹಿಜಾಬ್‌ ತೆಗೆಯಲು ನಿರಾಕರಿಸಿದ ಪ್ರಥಮ ವರ್ಷದ 16 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಮನೆಗಳಿಗೆ ಹೋದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *