Breaking News

ಸಭಾಪತಿ ವಿರುದ್ಧ ಎಫ್‌ಐಆರ್‌ ದಾಖಲು : ಇಂತಹ ಘಟನೆ ಮರುಕಳಿಸಿದರೆ ಕಠಿಣ ಕ್ರಮ : ಸಿಎಂ


ಬೆಂಗಳೂರು: ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಶಿಷ್ಟಾಚಾರದ ಪ್ರಕಾರ ಸಭಾಪತಿ ಸ್ಥಾನ ಉನ್ನತವಾದುದು. ಸಾಂವಿಧಾನಿಕ ಹುದ್ದೆಗಳಲ್ಲಿರುವವರ ವಿರುದ್ಧ ದೂರು ದಾಖಲಿಸು ವಾಗ ಅದಕ್ಕೂ ಮೊದಲು ಕೆಲವು ಪ್ರಕ್ರಿಯೆ ಅನುಸರಿಸಬೇಕು. ಹೊರಟ್ಟಿ ಅವರ ಪ್ರಕರಣದಲ್ಲಿ ಯಾವುದೂ ಪಾಲನೆಯಾಗದೇ ಲೋಪಗಳಾಗಿದ್ದು, ಮೇಲ್ನೋಟಕ್ಕೆ ದೃಢಪಟ್ಟಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *