ರಾಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತ ಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಈ ಕುರಿತು ಮಾತನಾಡಿದ ನವೀನ ಗ್ಯಾನಗೌಡರ ತಂದೆ ಶೇಖರಪ್ಪ, ” ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಿ, 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಿ ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು” ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

