Breaking News

ಬಸ್ ಪಲ್ಟಿ : 8 ಜನ ಸಾವು

ತುಮಕೂರು: ಪಳವಳ್ಳಿ ಕಟ್ಟಿ ಬಳಿ ತಿರುವಿನಲ್ಲಿ ತೆರಳುವಾಗ ಬಸ್ ಪಲ್ಟಿಯಾಗಿ ಬಿದ್ದಿದ್ದು, 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ 8 ಜನರ ಪೈಕಿ ನಾಲ್ವರು ವಿದ್ಯಾರ್ಥಿಗಳು ನಡೆದಿರುವ ಘಟನೆ ಜಿಲ್ಲೆಯ ಪಾವಗಡದ ಪಳವಳ್ಳಿ ಕಟ್ಟಿಯಲ್ಲಿ ಸಂಭವಿಸಿದೆ.

ಎಸ್ ವಿ ಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಇದಾಗಿದ್ದು, ಬಸ್ಸಿನ ಒಳಗೆ, ಮೆಟ್ಟಿಲುಗಳ ಮೇಲೆ ಮಾತ್ರವಲ್ಲ ಬಸ್ಸಿನ ಟಾಪ್ ಮೇಲೂ ಪ್ರಯಾಣಿಕರು ಹತ್ತಿ ಸಾಗಿದ್ದರು. ವೈ.ಎ.ಹೊಸಕೋಟೆ ಮೂಲದ ಕಲ್ಯಾಣ್ (18), ಅಮೂಲ್ಯ (17), ಅಜಿತ್ (21), ಶಾ ನವಾಜ್ (19) ಮೃತರು. ಎಲ್ಲರೂ ಪಾವಗಡ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಇನ್ನೂ ನಾಲ್ವರ ಗುರುತು ಪತ್ತೆಯಾಗಿಲ್ಲ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *