Breaking News

ವ್ಯಾಪಾರ ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು : ಸಿದ್ದರಾಮಯ್ಯ


ಉಡುಪಿ: ದೇಶದಲ್ಲಿ ಎಲ್ಲರೂ ಸ್ವತಂತ್ರರು, ಯಾರು ಯಾರಿಗೂ ಬೆದರಿಕೆ ಹಾಕುವಂತಿಲ್ಲ.ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ದೇವಸ್ಥಾನ, ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಮರು ವ್ಯಾಪಾರ ನಡೆಸಲು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಶನಿವಾರ ‘ಭೂ ಸುಧಾರಣಾ ಕಾಯ್ದೆ ಸುವರ್ಣ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು,  ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲು ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿಗೆ ವಿರುದ್ಧವಾದ ನಡವಳಿಕೆ ಸರಿಯಲ್ಲ. ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *