ಬೆಂಗಳೂರು: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಲಿದ್ದು, ಮಾರ್ಚ್ 21ರಂದು ಅಸನಿ ಎಂಬ ಈ ವರ್ಷದ ಮೊದಲ ಚಂಡಮಾರುತ ಬೀಸಲಿದೆ. ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಸನಿ ಚಂಡಮಾರುತ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಉದ್ದಕ್ಕೂ ಬೀಸಲಿದ್ದು, ಗಂಟೆಗೆ 70-90 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾವಣೆಯಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

