Breaking News

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ತಪ್ಪೇನಿದೆ : ಬೊಮ್ಮಾಯಿ

ಯಾದಗಿರಿ: ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್‌ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

ಸುರಪುರ ತಾಲ್ಲೂಕಿನ ದೇವತ್ಕಲ್‌ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಗುಜರಾತ್‌ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ ಅನುಕೂಲವಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವರಲ್ಲಿ ನೈತಿಕತೆ ಬೆಳೆಸುವ ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಉಂಟು ಮಾಡಬಾರದು’ ಎಂದರು.

Share News

About admin

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *