Breaking News

ಹಿಜಾಬ್ ತೀರ್ಪು : ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ


ಬೆಂಗಳೂರು: ಹಿಜಾಬ್ ವಿಚಾರವಾಗಿ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ ಮುಸ್ಲಿಂ ಮುಖಂಡರೊಬ್ಬರ ವಿರುದ್ಧ ಇಲ್ಲಿನ ವಿಧಾನಸೌಧ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ.

‘ವಕೀಲರಾದ ಸುಧಾ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು, ತಮಿಳುನಾಡು ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಮಧುರೈನಲ್ಲಿ ನಡೆದಿರುವ ಸಮಾವೇಶದ ಭಾಷಣದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ಹೈಕೋರ್ಟ್‌ನ ಅಧಿಕಾರಿಗಳು ಸಹ ಗಮನಕ್ಕೆ ತಂದಿದ್ದಾರೆ. ಮುಂದಿನ ಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ’ ಎಂದು ಅಧಿಕಾರಿ ಹೇಳಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *