ಚನ್ನಪಟ್ಟಣ: ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನತೆಯೇ ತಕ್ಕ ಪಾಠಕಲಿಸಬೇಕು. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮತಸೆಳೆಯಲು ಮುಂದಾಗಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕಿನ ಕದರಮಂಗಲ ಗ್ರಾಮದ ಕಂಬದ ನರಸಿಂಹಸ್ವಾಮಿ ಬೆಟ್ಟದಲ್ಲಿ ನಡೆದ ಜಾತ್ರಾಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸುದ್ದಿಗಾರರ ಜೊತೆ ಮಾತನಾಡಿ, ಭಗವದ್ಗೀತೆಯನ್ನು ಪಾಠಮಾಡಿದರೆ ಮಕ್ಕಳ ಹೊಟ್ಟೆತುಂಬುತ್ತದೆಯೇ, ಸರ್ಕಾರ ಇಂತಹ ವಿಚಾರಗಳನ್ನು ದೊಡ್ಡದು ಮಾಡುವುದನ್ನು ಬಿಟ್ಟಿ, ತಮ್ಮ ಮುಂದಿರುವ ಟನ್‌ಗಟ್ಟಲೆ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಲಿ ಎಂದು ಸಲಹೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

