ಹಾಸನ: ಅರಸೀಕೆರೆ ರಸ್ತೆಯ ದೊಡ್ಡಪುರದ ರೇವತಿ ಕೊಲೆ ಪ್ರಕರಣದಲ್ಲಿ ಆರೋಪಿ ಲತೇಶ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಾರ್ಚ್ 16ರಂದು ಸಂಜೆ ಮನೆ ಬಳಿ ಒಬ್ಬರೇ ಇದ್ದ ರೇವತಿಯನ್ನು ಲತೇಶ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ.ಅದಾದ ಬಳಿಕ ಸ್ಥಳಕ್ಕಾಗಮಿಸಿದ ಶ್ವಾನದಳ ನೇರವಾಗಿ ಲತೇಶನ ಮನೆ ಬಳಿಗೆ ಹೋಗಿ ನಿಂತಿತ್ತು.
ಇದರ ಆಧಾರದ ಮೇಲೆ ಆತನನ್ನು ವಶಕ್ಕೆ ಪಡೆದಿದ್ದ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆರೋಕಿಯಪ್ಪ ಹಾಗೂ ತಂಡ, ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಕೆಲ ವರ್ಷಗಳ ಹಿಂದೆ ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪದಡಿ ಜೈಲು ಸೇರಿದ್ದ. ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಯಾಗಿದ್ದ. ಜೈಲಿನಿಂದ ಬಿಡುಗಡೆಯಾಗಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

