Breaking News

ಪ್ರೀತಿಸಿದ ಹುಡುಗ ಬೇರೆ ಹುಡುಗಿಯ ಜೊತೆ ಮುದುವೆ : ಪ್ರೇಯಸಿ ಆತ್ಮಹತ್ಯೆ


ಶಿವಮೊಗ್ಗ : ಪ್ರೀತಿಗೆ ಕಣ್ಣು ಇಲ್ಲಾ ಎಅಮಬುವುದಕ್ಕೆ ಈ ರೂಪಾನೇ ಸಾಕ್ಷಿ. ಹಲವು ವರ್ಷಗಳಿಂದ ಪ್ರೀತಿ ಪಯಣ ಎಂದು ಸುತ್ತಾಡುತ್ತೀದ್ದು ಯುವಗ ಇದೀಗ ಬೇರೆ ಹುಡುಗಿಯನ್ನು ಮದುವೆಯಾಗುತ್ತೀದ್ದಾನೆ ಗೊತ್ತಾಗುತ್ತಿದ್ದಂತೆ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ .

ವೃತ್ತಿಯಲ್ಲಿ ಇಬ್ಬರೂ ಉಪನ್ಯಾಸಕರಾಗಿದ್ದು , ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದರೆ ಇತ್ತ ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು . ಇದರೊಂದಿಗೆ ಪಿಎಚ್.ಡಿ ಯನ್ನು ಮಾಡುತ್ತಿದ್ದರು .ರೂಪ ( 28 ) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ

ಈ ನಡುವೆ ಮುರಳಿ ರೂಪಾಳಿಗೆ ಕೈಕೊಟ್ಟು ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿ ಎಂಬ ಯುವತಿಯೊಂದಿಗೆ ಮದುವೆ ಮಾಡಿಕೊಂಡಿದ್ದಾನೆ . ಇದರಿಂದ ಮನನೊಂದ ರೂಪ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ .ಇಬ್ಬರ ಮನೆಯಲ್ಲೂ ಜಾತಿ ವಿಚಾರವಾಗಿ ಮದುವೆಗೆ ವಿರೋಧವಿತ್ತು ಎನ್ನಲಾಗಿದೆ . ಇತ್ತ ಪ್ರೇಯಸಿ ರೂಪಾ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿಕಟ್ಟಿ ಮುರುಳಿ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *