Breaking News

1 ಕೋಟಿ ವೆಚ್ಚದಲ್ಲಿ ನಾಲಾ ತಡೆಗೋಡೆ ನಿರ್ಮಾಣ : ಜಗದೀಶ್ ಶೆಟ್ಟರ್


ಧಾರವಾಡ : ವಿಕಾಸ ನಗರದ ಸಿದ್ದಲಿಂಗೇಶ್ವರ ಕಾಲೋನಿ ಹಾಗೂ ಶಿವಪುರ ಕಾಲೋನಿ ಉದ್ಯಾನದ ಬಳಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ತಲಾ 1 ಕೋಟಿ ವೆಚ್ಚದಲ್ಲಿ ನಾಲಾ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು .

ಇಂದು ವಿಕಾಸ ನಗರ ಹಾಗೂ ಶಿವಪುರ ಕಾಲೋನಿಯಲ್ಲಿ ನಾಲಾ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು .

ಶೀಘ್ರಗತಿಯಲ್ಲಿ ಕಾಮಗಾರಿಯು ಪೂರ್ಣಗೊಳ್ಳಬೇಕು . ಯಾವುದೇ ರೀತಿಯ ಕಳಪೆ ಮಟ್ಟದ ಕಾಮಗಾರಿ ಆಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲ್ಬುರ್ಗಿ , ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ , ವಿನಾಯಕ ಧೋಂಗಡಿ , ದೇವದಾಸ್ ಹಬೀಬ್ ಸೇರಿದಂತೆ ಪ್ರಮುಖರು ಇದ್ದರು .

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *