Breaking News

ತಾಯ್ನಾಡಿಗೆ ಮರಳಿದ ನವೀನ್ ಪಾರ್ಥಿವ ಶರೀರ

ದೇವನಹಳ್ಳಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿ ನವೀನ್ ಪಾರ್ಥಿವ 21 ದಿನಗಳ ನಂತರ ತಾಯ್ನಾಡಿಗೆ ಮರಳಿದೆ. ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಕ್ಕೆ ಹಸ್ತಾಂತರಿಸಿದರು.

ದುಬೈ ಮೂಲಕ ಸೋಮವಾರ ಮುಂಜಾನೆ 3 ಗಂಟೆ ವೇಳೆ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಇತರರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮೃತ ನವೀನ್ ಸಹೋದರ ಹರ್ಷ ಸೇರಿದಂತೆ ಗ್ರಾಮಸ್ಥರು ಪಾರ್ಥಿವ ಶರೀರವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪಡೆದುಕೊಂಡು ಆಂಬ್ಯುಲೆನ್ಸ್​ನಲ್ಲಿ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ತೆರಳಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *