Breaking News

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಡಿಕೆಶಿ

ಮೈಸೂರು : ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್ ಎನ್ನುವ ಮೂಲಕ ಬಿಜೆಪಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾವೂ ಸಹ ಹಿಂದೂಗಳೇ ಆಗಿದ್ದೇವೆ.ರಾಜೀವ್‌ಗಾಂಧಿ ಪ್ರಧಾನಿಯಾಗಿದ್ದ ಕಾಲದಲ್ಲಿ ದೂರದರ್ಶನದಲ್ಲಿ ರಾಮಾಯಣ, ಮಹಾಭಾರತಗಳನ್ನು ಪ್ರಸಾರ ಮಾಡಿ ಜನರಿಗೆ ತಲುಪಿಸಿದ್ದನ್ನು ಯಾರೂ ಮರೆಯಬಾರದು ಎಂದರು.

ಭಗವದ್ಗೀತೆ ಪ್ರಚಾರಕ್ಕೆ ಫೌಂಡೇಶನ್ ಹಾಕಿದ್ದೇ ರಾಜೀವ್‌ಗಾಂಧಿ. ದೂರದರ್ಶನದ ಮೂಲಕ ಮನೆ ಮನೆಗೆ ಮಹಾಭಾರತ, ರಾಮಾಯಣ ತೋರಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಗವದ್ಗೀತೆಗೆ ಗೌರವ ಸಿಗುವಂತೆ ಮಾಡಿದ್ದರು. ಆದರೆ, ಇಂದು ಬಿಜೆಪಿ ನಾಯಕರು ಅದೇ ವಿಚಾರವನ್ನಿಟ್ಟುಕೊಂಡು ಸಮಾಜವನ್ನು ಇಬ್ಬಾಗ ಮಾಡಲು ಮುಂದಾಗಿದ್ದಾರೆ. ಜನರೇನೂ ದಡ್ಡರಲ್ಲ. ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ಹೇಳಿದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *