ಚಾಮರಾಜನಗರ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ, ಕೆಲ್ಲಂಬಳ್ಳಿ ಬದನಗುಪ್ಪೆಯ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡುವುದರ ಜೊತೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ವಿ.ಪ್ರಭಾಕರ್, ಖಜಾಂಚಿ ಸಿ.ವಿ.ನಾರಾಯಣ, ಗೌರವ ಕಾರ್ಯದರ್ಶಿ ಎನ್.ಪ್ರಸಾದ್ ಹಾಗೂ ಗೌರವ ಸಲಹೆಗಾರರಾದ ಆರ್.ಶಿವಕುಮಾರ್ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

