ಧಾರವಾಡ : ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಹೊಡೆದು ಧಾರವಾಡ ಹಳಿಯಾಳ ರಸ್ತೆಯ ಮಾವಿನಕೋಪ್ಪದ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ.
ಹಳಿಯಾಳ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಇರ್ಫಾನ್ ಅಜಿಜ್ ಸವದತ್ತಿ (49) ಅಳ್ನಾವರ ನಿವಾಸಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಧಾರವಾಡ ಕಡೆಯಿಂದ ಹೋರಟ್ಟಿದ್ದ ಬೈಕ್ ಸವಾರ ಹಾಗೂ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ ಗ್ರಾಮೀಣ ಪೋಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಪೋಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

