ಬೆಂಗಳೂರು: ‘ಹತ್ತು ಎಚ್ಪಿ ಪಂಪ್ಸೆಟ್ವರೆಗೆ ಸೀಮಿತವಾಗಿ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲು ನಮಗೆ ತಕರಾರು ಇಲ್ಲ. ಇದರಿಂದ ದುರುಪಯೋಗ ಆಗಬಾರದು ಆದ್ದರಿಂದ ಕೆಲವು ನಿಬಂಧನೆಗಳನ್ನು ವಿಧಿಸಲಾಗುವುದು. ಅದನ್ನು ಒಪ್ಪಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್ ಈ ವಿಷಯ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅವರು ರೈತರಿಗೆ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಸರ್ಕಾರದ ಮೇಲೆ ₹14 ಸಾವಿರ ಕೋಟಿಯಷ್ಟು ಹೊರೆ ಇದೆ. ಬಡ ರೈತರಿಗೆಂದು 2008ರಲ್ಲಿ ಸಬ್ಸಿಡಿ ಯೋಜನೆ ಘೋಷಣೆ ಮಾಡಲಾಗಿತ್ತು. ಕಾಫಿ ಬೆಳೆಯುವವರು ಸ್ಥಿತಿವಂತರಿರುತ್ತಾರೆ ಎಂಬ ಕಾರಣಕ್ಕೆ ಆಗ ಸೇರಿಸಿರಲಿಲ್ಲ
ಎಂದು ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

