ಕೆಂಭಾವಿ (ಯಾದಗಿರಿ ಜಿಲ್ಲೆ): ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾಲೇಜಿನಲ್ಲಿ ಗದ್ದಲ ಉಂಟಾಗಿದೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಪದವಿ ಮೊದಲನೆ ಸೆಮಿಸ್ಟರ್ ಪ್ರಾಯೋಗಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಆಗಮಿಸಿದ ಸುಮಾರು ಐದು ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಲಾಗಿದೆ.
ಪರೀಕ್ಷಾ ಮೇಲ್ವಿಚಾರಕರು ಒಂದು ಗಂಟೆಯ ನಂತರ ಪ್ರಶ್ನೆ ಪತ್ರಿಕೆ ಮರಳಿ ಪಡೆದಿದ್ದಾರೆ.
ಈ ಕುರಿತು ಕಾಲೇಜಿನ ಪ್ರಾಚಾರ್ಯ ಎಚ್.ಎಂ.ವಗ್ಗರ್ ಘಟನೆ ಬಗ್ಗೆ ನನಗೆನೂ ಗೊತ್ತಿಲ್ಲವೆಂದು ತಿಳಿಸಿದ್ದಾರೆ.
ಕಾಲೇಜಿನ ಪ್ರಾಚಾರ್ಯ ಮತ್ತು ಪರೀಕ್ಷಾ ಮೇಲ್ವಿಚಾರಕರ ಪ್ರಮಾದದಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

