ಬೆಂಗಳೂರು: ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತ ವಿರೋಧಿ ತಿದ್ದುಪಡಿಗಳನ್ನು ರದ್ದುಪಡಿಸಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಸಂಯುಕ್ತ ಹೋರಾಟ -ಕರ್ನಾಟಕ ನಗರದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಉಳುವವನೇ ನೆಲದ ಒಡೆಯನಾಗಬೇಕು ಎಂಬ ಉದ್ದೇಶದಿಂದ ಭೂಸುಧಾರಣಾ ಕಾಯ್ದೆ ಜಾರಿಗೆ ತರಲಾಗಿತ್ತು. ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ‘ಉಳ್ಳವನೇ ನೆಲದೊಡೆಯ’ ಎಂಬಂತಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶವನ್ನೇ ನೆಪ ಮಾಡಿಕೊಂಡು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂಪರಭಾರೆ ನಿಷೇಧ ಕಾಯ್ದೆಯ(ಪಿಟಿಸಿಎಲ್) ಉದ್ದೇಶವನ್ನೇ ಬುಡಮೇಲು ಮಾಡಲಾಗುತ್ತಿದೆ. ಕೃಷಿಕರು ಮತ್ತು ದಲಿತರು ಭೂರಹಿತರಾಗಿ ಮತ್ತೆ ಕೃಷಿ ಕಾರ್ಮಿಕರಾಗುತ್ತಿದ್ದಾರೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

